Isaiah 13:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪರ್ವತಗಳಲ್ಲಿ ಒಂದು ದೊಡ್ಡ ಶಬ್ದ ಕೇಳಿಸುತ್ತದೆ. ಆ ಶಬ್ದಕ್ಕೆ ಕಿವಿಗೊಡಿರಿ. ದೊಡ್ಡ ಜನಸಮೂಹದ ಶಬ್ದದಂತೆ ಕೇಳಿಸುತ್ತದೆ. ಅನೇಕ ರಾಜ್ಯಗಳ ಜನರು ಒಟ್ಟಾಗಿ ಸೇರುತ್ತಿದ್ದಾರೆ. ಸರ್ವಶಕ್ತನಾದ ಯೆಹೋವನು ತನ್ನ ಸೈನ್ಯವನ್ನು ಒಟ್ಟುಗೂಡಿಸುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.
Kannada BSI Bible 2016
ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಬಹು ಜನಸಮೂಹವಿದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗಗಳ ಆರ್ಭಟ! ಸೇನಾಧೀಶ್ವರನಾದ ಯೆಹೋವನು ಸೈನ್ಯವನ್ನು ಯುದ್ಧಕ್ಕಾಗಿ ಅಣಿಮಾಡುತ್ತಿದ್ದಾನೆ.
Kannada Bible (KNCL) BSI 2016
ಇಗೋ, ಬೆಟ್ಟಗುಡ್ಡಗಳಿಂದ ಕೇಳಿಬರುತ್ತಿದೆ ಜನಜಂಗುಳಿಯಂಥ ಗದ್ದಲ; ಒಟ್ಟಿಗೆ ಕೂಡಿಕೊಂಡ ದೇಶವಿದೇಶಗಳ ಆರ್ಭಟ; ಸಜ್ಜಾಗಿ ನಿಂತಿದೆ ಸೇನಾಧೀಶ್ವರ ಸರ್ವೇಶ್ವರನ ಸೈನ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ. ಒಟ್ಟಿಗೆ ಕೂಡಿಕೊಂಡ ರಾಜ್ಯಗಳ ಜನಾಂಗಗಳ ಆರ್ಭಟ, ಸೇನಾಧೀಶ್ವರ ಯೆಹೋವ ದೇವರು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾರೆ.