Isaiah 13:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೂ ಆ ಸೈನ್ಯವೂ ದೂರದಿಂದ ಬರುತ್ತಿದ್ದಾರೆ. ದಿಗಂತದ ಆಚೆಯಿಂದ ಅವರು ಬರುತ್ತಿದ್ದಾರೆ. ತನ್ನ ಸಿಟ್ಟನ್ನು ಪ್ರದರ್ಶಿಸುವದಕೋಸ್ಕರ ಯೆಹೋವನು ಈ ಸೈನ್ಯವನ್ನು ಉಪಯೋಗಿಸುವನು. ಈ ಸೈನ್ಯವು ಇಡೀ ಭೂಮಿಯನ್ನು ಹಾಳು ಮಾಡುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.
Kannada BSI Bible 2016
ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ, ಭೂವಿುಯನ್ನೆಲ್ಲಾ ಹಾಳುಮಾಡುವದಕ್ಕಾಗಿ ಬಂದಿದ್ದಾರೆ.
Kannada Bible (KNCL) BSI 2016
ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ.