Isaiah 13:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.
Kannada BSI Bible 2016
ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು.
Kannada Bible (KNCL) BSI 2016
ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.