Isaiah 13:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಬ್ಬರೂ ಭಯಪೀಡಿತರಾಗುವರು. ಯಾತನೆವೇದನೆಗಳು ಅವರನ್ನು ಆಕ್ರಮಿಸುವವು. ಪ್ರಸವವೇದನೆಯಿಂದ ನರಳುವ ಹೆಂಗಸಿನಂತೆ ಅವರ ಹೊಟ್ಟೆಯಲ್ಲಿ ನೋವು ಉಂಟಾಗುವದು; ಅವರ ಮುಖಗಳು ಬೆಂಕಿಯಂತೆ ಕೆಂಪಗಾಗುವವು. ಭಯದ ಮುಖವು ತಮ್ಮ ನೆರೆಯವರಲ್ಲಿಯೂ ಇರುವದನ್ನು ನೋಡಿ ಜನರು ಆಶ್ಚರ್ಯಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.
Kannada BSI Bible 2016
ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಬೆಚ್ಚಿಬೀಳುವರು, ಯಾತನೆವೇದನೆಗಳು ಅವರನ್ನಾಕ್ರವಿುಸುವವು. ಹೆರುವ ಹೆಂಗಸಿನಂತೆ ಸಂಕಟಪಡುವರು; ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು, ಅವರ ಮುಖಗಳು [ತಲ್ಲಣದಿಂದ] ಬೆಂಕಿಬೆಂಕಿಯಾಗುವವು.
Kannada Bible (KNCL) BSI 2016
ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಭಯಪಡುವರು. ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವುವು. ಪ್ರಸವವೇದನೆಯಲ್ಲಿರುವ ಸ್ತ್ರೀಯರಂತೆ ಸಂಕಟಪಡುವರು. ಅವರು ಒಬ್ಬರಿಗೊಬ್ಬರು ಭ್ರಮೆ ಪಡುವರು. ಅವರ ಮುಖಗಳು ಜ್ವಾಲೆಯಂತಿರುವುವು.