Isaiah 13:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭಯಂಕರವಾದ ದಿನವಾಗಿದೆ. ದೇವರು ಅತ್ಯಂತ ಕೋಪದಿಂದ ದೇಶವನ್ನೆಲ್ಲಾ ನಾಶಮಾಡುವನು; ದುಷ್ಟಜನರನ್ನೆಲ್ಲಾ ದೇಶವನ್ನು ಬಿಟ್ಟುಹೋಗುವಂತೆ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.
Kannada BSI Bible 2016
ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಯೆಹೋವನ ದಿನವು ಬರುತ್ತಿದೆ; ಅದು ಭೂವಿುಯನ್ನು ಹಾಳುಮಾಡಿ ಪಾಪಿಗಳನ್ನು ನಿರ್ಮೂಲಪಡಿಸುವದಕ್ಕೆ [ಆತನ] ಕೋಪೋದ್ರೇಕದಿಂದಲೂ ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವದು.
Kannada Bible (KNCL) BSI 2016
ಇಗೋ, ಸರ್ವೇಶ್ವರನ ದಿನ ಬರುತ್ತಿದೆ! ಭೂಮಿಯನ್ನು ಹಾಳುಮಾಡಲು, ಪಾಪಿಗಳನ್ನು ನಿರ್ಮೂಲಮಾಡಲು; ಕೋಪೋದ್ರೇಕದಿಂದ, ರೋಷಾವೇಶದಿಂದ, ಕ್ರೂರವಾಗಿ ಬರುತ್ತಿದೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಯೆಹೋವ ದೇವರ ದಿನವು ಬರುತ್ತದೆ. ಅದು ಭೂಮಿಯನ್ನು ಹಾಳು ಮಾಡುವುದಕ್ಕೂ, ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ, ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು.