Isaiah 14:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಉದಯ ನಕ್ಷತ್ರದಂತೆ ಇರುವೆ. ಆದರೆ ನೀನು ಆಕಾಶದಿಂದ ಕೆಳಗೆ ಬಿದ್ದಿರುವೆ. ಹಿಂದಿನ ಕಾಲದಲ್ಲಿ ಲೋಕದ ಎಲ್ಲಾ ರಾಜ್ಯಗಳು ನಿನಗೆ ಅಡ್ಡಬಿದ್ದವು. ಆದರೆ ಈಗ ನೀನು ಉರುಳಿಸಲ್ಪಟ್ಟಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!
Kannada BSI Bible 2016
ಓ ಲೂಸಿಫರ್‌ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಉದಯನಕ್ಷತ್ರವೇ, ಬೆಳ್ಳಿಯೇ, ಆಕಾಶದಿಂದ ಹೇಗೆ ಬಿದ್ದೆ! ಜನಾಂಗಗಳನ್ನು ಕೆಡವಿದ ನೀನು ಕಡಿಯಲ್ಪಟ್ಟು ನೆಲಕ್ಕೆ ಉರುಳಿದೆಯಲ್ಲಾ!
Kannada Bible (KNCL) BSI 2016
ಮುಂಜಾನೆಯ ನಕ್ಷತ್ರವೆ, ಉದಯ ಕುಮಾರನೆ, ಆಗಸದಿಂದ ಹೇಗೆ ಬಿದ್ದೆ? ರಾಷ್ಟ್ರಗಳನ್ನು ಗೆದ್ದ ನೀನು, ನೆಲಕ್ಕೆ ಅದು ಹೇಗೆ ಉರುಳಿದೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಬಿದ್ದೆ?