Isaiah 14:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅದು ಸಂಭವಿಸಲಿಲ್ಲ. ನೀನು ಆಕಾಶಕ್ಕೆ ದೇವರೊಂದಿಗೆ ಹೋಗಲಿಲ್ಲ. ನೀನು ಆಳವಾದ ಗುಂಡಿಗೆ ದಬ್ಬಲ್ಪಟ್ಟೆ. ಮರಣಸ್ಥಳವಾಗಿರುವ ಪಾತಾಳಕ್ಕೆ ನೀನು ದಬ್ಬಲ್ಪಟ್ಟೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.
Kannada BSI Bible 2016
ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧಸ್ಥಳಗಳಿಗೆ, ತಳ್ಳಲ್ಪಡುತ್ತಿದ್ದೀ.
Kannada Bible (KNCL) BSI 2016
ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪಾತಾಳದ ಕುಣಿಯ ಕಡೆಗೂ, ಸಮಾಧಿಗೂ ಇಳಿಯುವೆ.