Isaiah 14:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದುಷ್ಟ ಅರಸನಾದ ನೀನು ನಿನ್ನ ಸಮಾಧಿಯಿಂದ ತೆಗೆದುಹಾಕಲ್ಪಟ್ಟಿರುವೆ. ಮರದಿಂದ ಬೇರ್ಪಡಿಸಿದ ಕೊಂಬೆಯಂತೆ ನೀನಿರುವೆ. ಯುದ್ಧದಲ್ಲಿ ಸತ್ತ ಸೈನಿಕನಂತೆ ನೀನಿರುವೆ. ಬೇರೆ ಸೈನಿಕರು ಅವನ ಮೇಲೆ ನಡೆದಾಡುವರು. ಈಗ ನೀನು ಸಾಧಾರಣ ಹೆಣದಂತೆ ಇರುವೆ. ಸಮಾಧಿಯ ಬಟ್ಟೆಗಳಿಂದ ನೀನು ಸುತ್ತಲ್ಪಟ್ಟಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,
Kannada BSI Bible 2016
ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನಾದರೋ ನಿನ್ನ ಗೋರಿಗೆ ದೂರವಾಗಿ ಕೆಟ್ಟ ಮೊಳಿಕೆಯಂತೆ ಬಿಸಾಡಲ್ಪಟ್ಟಿದ್ದೀ; ನಿನ್ನ ಶವವು ತುಳಿತಕ್ಕೆ ಈಡಾಗಿದೆ, ಕತ್ತಿ ತಿವಿದು ಗುಂಡಿಯ ಕಲ್ಲುಗಳ ಪಾಲಾದ ಹತರೇ ಅದಕ್ಕೆ ಹೊದಿಕೆ.
Kannada Bible (KNCL) BSI 2016
ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ತಿರಸ್ಕರಿಸಿದ ಕೊಂಬೆಯಂತೆಯೂ, ಖಡ್ಗ ತಿವಿದು ಕಲ್ಲುಗುಂಡಿಗೆ ಪಾಲಾದ ಹೆಣಗಳ ಹೊದಿಕೆಯಂತೆಯೂ, ಪರರ ತುಳಿತಕ್ಕೆ ಈಡಾಗಿ, ಸಮಾಧಿಯೊಳಗಿಂದ ಹೊರಗೆ ಬಿಸಾಡಿರುವ ಶವದ ಹಾಗಿದ್ದೀ.