Isaiah 14:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಮಕ್ಕಳನ್ನು ಕೊಲ್ಲಲು ಸಿದ್ಧಗೊಳ್ಳಿರಿ. ಅವರ ತಂದೆಯ ದುಷ್ಟತನಕ್ಕಾಗಿ ಅವರನ್ನು ಕೊಲ್ಲಿರಿ. ಅವನ ಮಕ್ಕಳು ದೇಶವನ್ನು ಇನ್ನೆಂದಿಗೂ ತಮ್ಮ ವಶಕ್ಕೆ ತೆಗೆದುಕೊಳ್ಳಲಾರರು. ಅವರು ಪ್ರಪಂಚವನ್ನು ಇನ್ನೆಂದಿಗೂ ತಮ್ಮ ಪಟ್ಟಣಗಳಿಂದ ತುಂಬಿಸಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.
Kannada BSI Bible 2016
ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಿತೃಗಳ ಅಧರ್ಮದ ನಿವಿುತ್ತ ಇವನ ಮಕ್ಕಳಿಗೂ ವಧ್ಯಸ್ಥಾನವನ್ನು ಸಿದ್ಧಮಾಡಿರಿ! ಅವರು ತಲೆಯೆತ್ತಿ ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ!
Kannada Bible (KNCL) BSI 2016
ತಲೆಯೆತ್ತಿ ಪೃಥ್ವಿಯನೇ ವಶಪಡಿಸಿಕೊಳ್ಳದಂತೆ, ಧರೆಯ ಮೇಲೆಲ್ಲ ನಗರಗಳನ್ನು ಕಟ್ಟಿಕೊಳ್ಳದಂತೆ, ಸಿದ್ಧಮಾಡಿರಿವನ ಮಕ್ಕಳಿಗೆ ವಧ್ಯಸ್ಥಾನ, ಈತನ ಪಿತಾಪಿತೃಗಳ ಪಾಪಕೃತ್ಯಗಳ ಕಾರಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಏಳದೆ ಇಲ್ಲವೆ ದೇಶವನ್ನು ವಶಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ, ಅವರ ತಂದೆಗಳ ಅಪರಾಧದ ನಿಮಿತ್ತ, ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.