Isaiah 14:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
Kannada BSI Bible 2016
ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಆ ಪ್ರದೇಶವನ್ನು ಜವುಗುನೆಲವನ್ನಾಗಿಯೂ ಮುಳ್ಳುಹಂದಿಗೆ ಸೊತ್ತನ್ನಾಗಿಯೂ ಮಾಡಿ ನಾಶನವೆಂಬ ಬರಲಿನಿಂದ ಗುಡಿಸಿಬಿಡುವೆನು ಎಂದು ಸೇನಾಧೀಶ್ವರನಾದ ಯೆಹೋವನು ಹೇಳಿದ್ದಾನೆ.
Kannada Bible (KNCL) BSI 2016
ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದನ್ನು ಮುಳ್ಳುಹಂದಿಗಳ ನಿವಾಸವಾಗಿಯೂ, ಕೊಳಚೆ ಪ್ರದೇಶವನ್ನಾಗಿಯೂ ಪರಿವರ್ತಿಸುವೆನು. ನಾಶನದ ಕಸಬರಿಗೆಯಿಂದ ಅದನ್ನು ಗುಡಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.