Isaiah 14:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
Kannada BSI Bible 2016
ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು: “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಆಣೆ ಇಟ್ಟು ಹೇಳುವುದೇನೆಂದರೆ, “ನಾನು ಯೋಚಿಸಿದ ರೀತಿಯಲ್ಲಿ ಖಂಡಿತವಾಗಿ ಆಗುವುದು. ನಾನು ಉದ್ದೇಶಿಸಿದ ರೀತಿಯಲ್ಲಿಯೇ ನೆರವೇರುವುದು.
Recommended Reading