Isaiah 14:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.
Kannada BSI Bible 2016
ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು; ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ ಹೊರಿಸಿದ ಹೊರೆಯು ನನ್ನ ಜನರ ಹೆಗಲಿಗೆ ದೂರವಾಗುವದು.
Kannada Bible (KNCL) BSI 2016
ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.”