Isaiah 14:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನನ್ನ ಬಡಜನರು ಸುರಕ್ಷಿತವಾಗಿ ಊಟಮಾಡುವರು. ಅವರ ಮಕ್ಕಳೂ ಸುರಕ್ಷಿತವಾಗಿರುವರು. ನನ್ನ ಬಡಜನರು ಹಾಯಾಗಿ ಮಲಗಿ ಸುರಕ್ಷಿತರಾಗಿರುವರು. ಆದರೆ ನಿಮ್ಮ ಸಂತಾನದವರು ಹಸಿವೆಯಿಂದ ಸಾಯುವಂತೆ ಮಾಡುವೆನು. ನಿಮ್ಮ ದೇಶದಲ್ಲಿ ಉಳಿದಿರುವ ಜನರೆಲ್ಲರೂ ಸಾಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು.
Kannada BSI Bible 2016
ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ನನ್ನ ಜನರಲ್ಲಿ] ಬಡತನದ ಹಿರಿಯ ಮಕ್ಕಳಿಗೂ ಪೋಷಣೆಯಾಗುವದು, ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು; ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು [ಆ ಸರ್ಪವೇ] ಕೊಲ್ಲುವದು.
Kannada Bible (KNCL) BSI 2016
ಪೋಷಣೆ ಪಡೆಯುವರು ದೀನದಲಿತರು, ನಿರ್ಭಯದಿಂದ ನಿದ್ರಿಸುವರು ದಿಕ್ಕಿಲ್ಲದವರು. ನಿನ್ನ ಸಂತಾನದವರಾದರೋ ಸಾಯುವರು ಕ್ಷಾಮದಿಂದ, ಅಳಿದುಳಿದವರು ಹತರಾಗುವರು ಆ ಘಟಸರ್ಪದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವರಲ್ಲಿ ಬಡವರಾದವರು ಆಹಾರ ಕಂಡುಕೊಳ್ಳುವರು. ಕೊರತೆಯಲ್ಲಿರುವವರು ಸುರಕ್ಷಿತವಾಗಿ ನಿದ್ರಿಸುವರು. ಆದರೆ ನಿನ್ನ ಸಂತಾನದವರೋ ಕ್ಷಾಮದಿಂದ ಹತರಾಗುವರು. ನಿನ್ನಲ್ಲಿ ಉಳಿದವರನ್ನು ಅದು ಹತಮಾಡುವುದು.