Isaiah 14:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಹಾದ್ವಾರಗಳ ಬಳಿಯಲ್ಲಿರುವ ಜನರೇ, ಗೋಳಾಡಿರಿ! ಪಟ್ಟಣದೊಳಗಿರುವ ಜನರೇ, ಕೂಗಾಡಿರಿ! ಫಿಲಿಷ್ಟಿಯದಲ್ಲಿರುವವರೆಲ್ಲರೂ ಭಯಪಡುವರು. ನಿಮ್ಮ ಧೈರ್ಯವು ಮೇಣದಂತೆ ಕರಗಿಹೋಗುವದು. ಇಗೋ, ಉತ್ತರದಿಕ್ಕಿನಲ್ಲಿ ಧೂಳು ಏಳುತ್ತಿದೆ. ಅಶ್ಶೂರದ ಸೈನ್ಯವು ಬರುತ್ತಿದೆ. ಅವರೆಲ್ಲರೂ ಬಲಶಾಲಿಗಳಾದ ವೀರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.
Kannada BSI Bible 2016
ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕುಂದಿಹೋಗಿರಿ! ಬಡಗಲಿಂದ ಹೊಗೆಯು ಬರುತ್ತಿದೆ. ಆ ವ್ಯೂಹದಲ್ಲಿ ಹಿಂದು ಬೀಳುವವರಿಲ್ಲ.
Kannada Bible (KNCL) BSI 2016
ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.