Isaiah 14:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.
Kannada BSI Bible 2016
ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.
Kannada Bible (KNCL) BSI 2016
ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”