Isaiah 14:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ದುಷ್ಟ ಅರಸನಾಗಿದ್ದೆ, ಈಗ ನಿನಗೆ ಅಂತ್ಯವು ಬಂತು. ತುರಾಯಿ ಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ಹರ್ಷಗೊಂಡಿವೆ. ಆ ಮರಗಳು ಹೀಗೆ ಹೇಳುತ್ತಿವೆ: ಅರಸನು ನಮ್ಮನ್ನು ಕಡಿದುರುಳಿಸಿದನು. ಈಗ ಅರಸನೇ ಉರುಳಿಬಿದ್ದಿದ್ದಾನೆ. ಅವನು ಮತ್ತೆಂದಿಗೂ ಏಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
Kannada BSI Bible 2016
ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ತುರಾಯಿಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ನೀನು ಬಿದ್ದುಕೊಂಡ ಮೇಲೆ ಕಡಿಯುವವನು ಯಾವನೂ ನಮ್ಮ ತಂಟೆಗೆ ಬಂದಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
Kannada Bible (KNCL) BSI 2016
ನಲಿಯುತಿಹವು ತುರಾಯಿ, ಲೆಬನೋನಿನ ದೇವದಾರು ವೃಕ್ಷಗಳು ಕೂಡಾ, ‘ಮಡಿದು ಹೋದನಿವನು, ಇನ್ನು, ಕಡಿವವರಾರು ನಮ್ಮನು?’ ಎನ್ನುತಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತುರಾಯಿ ಮರಗಳೂ, ಲೆಬನೋನಿನ ದೇವದಾರು ಮರಗಳೂ, “ಈಗ ನೀನು ಬಿದ್ದದ್ದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ,” ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.