Isaiah 14:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಬರುವದರಿಂದ ಮರಣದ ಸ್ಥಳವಾಗಿರುವ ನರಕವು ಉತ್ಸಾಹಗೊಂಡಿದೆ. ನಿನ್ನನ್ನು ಎದುರುಗೊಳ್ಳುವದಕ್ಕಾಗಿ ಪಾತಾಳವು ಲೋಕದ ಎಲ್ಲಾ ಅಧಿಪತಿಗಳ ಆತ್ಮಗಳನ್ನು ಎಬ್ಬಿಸಿದೆ. ಅರಸರು ತಮ್ಮ ಸಿಂಹಾಸನದಲ್ಲಿ ನಿಂತುಕೊಳ್ಳುವಂತೆ ಪಾತಾಳವು ಮಾಡುತ್ತಿದೆ. ಅವರು ನಿನ್ನ ಬರುವಿಕೆಯನ್ನು ಕಾಯುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.
Kannada BSI Bible 2016
ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬರುತ್ತಿರುವ ನಿನ್ನನ್ನು ಎದುರುಗೊಳ್ಳುವದಕ್ಕೆ ಕೆಳಗಡೆ ಪಾತಾಳವು ತಳಮಳಪಡುತ್ತದೆ; ನಿನಗೋಸ್ಕರ ಪ್ರೇತಗಳನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ ಜನಾಂಗಗಳ ಸಕಲ ರಾಜರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.
Kannada Bible (KNCL) BSI 2016
ನಿನ್ನ ಸ್ವಾಗತಿಸಲು ಸಡಗರದಿಂದಿದೆ ಪಾತಾಳಲೋಕವು, ಚೇತನಗೊಂಡಿವೆ ಲೋಕಮುಖಂಡರ ಪ್ರೇತಗಳು, ಎದ್ದು ನಿಂತಿಹರು ಸಕಲ ರಾಷ್ಟ್ರಗಳ ಅರಸರುಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನಗೋಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವುದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವರನ್ನು ಎಂದರೆ, ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರ ಆತ್ಮಗಳನ್ನು ಕಲಕಿ ಎಚ್ಚರಿಸಿ, ಜನಾಂಗಗಳ ಎಲ್ಲಾ ರಾಜರನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.