Isaiah 15:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬಿನ ಬಗ್ಗೆ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು; ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.
Kannada BSI Bible 2016
ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್‌ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್‌ ಹಾಳಾಗಿ ನಿಶ್ಯಬ್ಧವಾಯಿತು
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬಿನ ವಿಷಯವಾದ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತಲ್ಲಾ! ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.
Kannada Bible (KNCL) BSI 2016
ಮೋವಾಬನ್ನು ಕುರಿತ ದೈವೋಕ್ತಿ ಇದು: “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬಿನ ವಿಷಯವಾದ ಪ್ರವಾದನೆ: ಆ ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು. ಹೌದು, ಆ ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು.