Isaiah 15:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.
Kannada BSI Bible 2016
ಬಯಿತ್‌ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.
Kannada Bible (KNCL) BSI 2016
ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಬೋನ್ ಊರಿನವರು ಅಳುವುದಕ್ಕಾಗಿ ಎತ್ತರವಾದ ಪೂಜಾಸ್ಥಳಕ್ಕೆ ಹೋಗಿದ್ದಾರೆ; ನೆಬೋ ಹಾಗೂ ಮೇದೆಬ ಪಟ್ಟಣದವರಿಗಾಗಿ ಮೋವಾಬ್ಯರು ಗೋಳಾಡುತ್ತಾರೆ. ಪ್ರತಿಯೊಬ್ಬರ ತಲೆಯು ಬೋಳು, ಪ್ರತಿಯೊಬ್ಬರ ಗಡ್ಡವೂ ವಿಕಾರವಾಗಿ ಕತ್ತರಿಸಿದೆ.