Isaiah 15:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬಿನ ಎಲ್ಲಾ ಕಡೆಗಳಲ್ಲೂ ಮನೆಯ ಚಾವಣಿಯ ಮೇಲೂ ಬೀದಿಗಳಲ್ಲೂ ಜನರು ಗೋಣಿತಟ್ಟುಗಳನ್ನು ಧರಿಸಿಕೊಂಡು ರೋಧಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ ಮತ್ತು ತಮ್ಮ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ಎಲ್ಲರು ಅರಚುತ್ತಾ ಕಣ್ಣೀರನ್ನು ಸುರಿಸಿ ಸುರಿಸಿ ಗೋಳಾಡುತ್ತಾ ಇಳಿದು ಹೋಗಿದ್ದಾರೆ.
Kannada BSI Bible 2016
ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟು ಸುತ್ತಿಕೊಂಡಿದ್ದಾರೆ; ತಮ್ಮ ತಮ್ಮ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಎಲ್ಲರು ಅರಚುತ್ತಾ ಕಣ್ಣೀರನ್ನು ಸುರಿಸಿ ಸುರಿಸಿ ಇಳಿದು ಹೋಗಿದ್ದಾರೆ.
Kannada Bible (KNCL) BSI 2016
ಗೋಣಿತಟ್ಟನುಟ್ಟು ತಿರುಗುತಿಹರು ಹಾದಿಬೀದಿಗಳಲಿ, ಕಣ್ಣೀರಿಡುತ ಸೊರಗಿಹರು ಮಳಿಗೆಗಳಲಿ, ಬೀದಿ ಚೌಕಗಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ಬೀದಿಗಳಲ್ಲಿ ಗೋಣಿತಟ್ಟನ್ನು ತಾವೇ ಸುತ್ತಿಕೊಳ್ಳುವರು. ಪ್ರತಿಯೊಬ್ಬನು ತನ್ನ ಮನೆಯ ಮೇಲೆಯೂ, ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕದಿಂದ ಗೋಳಾಡುವನು.