Isaiah 15:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ. ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ.
Kannada BSI Bible 2016
ಹೆಷ್ಬೋನ್‌ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ; ಇವುಗಳ ರೋದನವು ಯಹಜಿನವರೆಗೂ ಕೇಳಬರುತ್ತದೆ; ಇದರಿಂದ ಮೋವಾಬಿನ ಭಟರು ಕಿರಚಿಕೊಳ್ಳುತ್ತಾರೆ; ಅದರ ಆತ್ಮವು ತನ್ನೊಳಗೆ ತತ್ತರಿಸುತ್ತದೆ.
Kannada Bible (KNCL) BSI 2016
ಕೂಗಿಕೊಳ್ಳುತಿಹವು ಹೆಷ್ಬೋನ್ ಎಲೆಯಾಲೆಗಳು, ಕೇಳಿಬರುತಿಹುದು ಯಹಚಿನವರೆಗೂ ಅವುಗಳ ರೋದನವು, ಕಿರಿಚಿಕೊಳ್ಳುತಿಹರು ಮೋವಾಬಿನ ಸೇನೆಯಾಳುಗಳು, ತತ್ತರಿಸಿ ಹೋಗಿಹವು ಅವರ ಗುಂಡಿಗೆಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಅವರ ಸ್ವರವು ಯಹಚ ಊರಿನವರೆಗೂ ಕೇಳಿಸುತ್ತದೆ. ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು. ಅವರ ಹೃದಯಗಳು ತತ್ತರಿಸುತ್ತವೆ.