Isaiah 15:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. ದೂರದಲ್ಲಿರುವ ಎಗ್ಲಯಿಮಿನಲ್ಲೂ ಜನರು ಅಳುತ್ತಿದ್ದಾರೆ. ಬೆಯೇರ್ ಏಲೀಮ್ ಪಟ್ಟಣದಲ್ಲೂ ಜನರು ರೋಧಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ.
Kannada BSI Bible 2016
ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್‌ ಏಲೀಮಿನ ವರೆಗೂ ವ್ಯಾಪಿಸಿದೆ.ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿವಿುನವರೆಗೂ ಬೆಯೇರ್ ಏಲೀವಿುನ ಪರ್ಯಂತವೂ ವ್ಯಾಪಿಸಿದೆ.
Kannada Bible (KNCL) BSI 2016
ಹಬ್ಬಿದೆ ಅದರ ಪ್ರಲಾಪ ಮೋವಾಬಿನ ಎಲ್ಲೆಗಳ ಪರಿಯಂತ, ವ್ಯಾಪಿಸಿದೆ ಅದರ ಆಕ್ರಂದ ಎಗ್ಲಯಿಮಿನ್, ಬೆಯೆರ್ ಏಲೀಮಿನ ತನಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಕೂಗಾಟವು ಮೋವಾಬಿನ ಎಲೆಗಳ ತನಕ ಹಬ್ಬಿದೆ. ಅದರ ಕಿರಿಚಾಟ ಎಗ್ಲಯಿಮ್ ಹಾಗೂ ಬೆಯೆರ್ ಏಲೀಮ್ ಊರುಗಳ ತನಕ ವ್ಯಾಪಿಸಿದೆ.