Isaiah 15:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೀಮೋನಿನ ನೀರು ರಕ್ತಮಯವಾಗಿದೆ. ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು. ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿದ್ದಾರೆ. ಆದರೆ ಅವರನ್ನು ಸಾಯಿಸಲು ನಾನು ಸಿಂಹಗಳನ್ನು ಕಳುಹಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಮೋನಿನ ನೀರೆಲ್ಲಾ ರಕ್ತವಾಯಿತು. ಆದರೆ ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
Kannada BSI Bible 2016
ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಮೋನಿನ ನೀರೆಲ್ಲಾ ರಕ್ತಮಯವಾಯಿತು; ಮತ್ತು ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು, ಬರಮಾಡುವೆನು.
Kannada Bible (KNCL) BSI 2016
ಹರಿಯುತಿದೆ ದೀಮೋನಿನ ನದಿ ರಕ್ತಮಯವಾಗಿ, ಕಾದಿದೆ ದೀಮೋನರಿಗೆ ಇನ್ನೂ ಹೆಚ್ಚಿನ ಹಾನಿ, ಎರಗಲಿದೆ ಅಳಿದುಳಿದ ಮೋವಾಬ್ಯರ ಮೇಲೆ ಒಂದು ಕೇಸರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಮೋನ್ ನದಿಯ ನೀರೆಲ್ಲಾ ರಕ್ತವಾಯಿತು. ದೀಮೋನಿನ ಮೇಲೆ ಹೆಚ್ಚಾದ ಹಾನಿಯನ್ನು ತರುವೆನು. ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.