Isaiah 16:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಹೊಸ ಅರಸನು ಬರುವನು. ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. ಆತನು ದಾವೀದನ ವಂಶದವನಾಗಿದ್ದಾನೆ. ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.
Kannada BSI Bible 2016
ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸಿಂಹಾಸನವು ಕೃಪಾಧಾರದ ಮೇಲೆ ಸ್ಥಾಪಿತವಾಗಿದೆ; ರಾಜ್ಯಭಾರಪ್ರವೀಣನೂ ಧರ್ಮಾಸಕ್ತನೂ ನ್ಯಾಯನಿಪುಣನೂ ಆದವನು ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ಕುಳಿತಿದ್ದಾನೆ.
Kannada Bible (KNCL) BSI 2016
ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರೀತಿಯಲ್ಲಿ ಸಿಂಹಾಸನವು ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ, ದಾವೀದನ ಗುಡಾರದಲ್ಲಿ ಅದರ ಮೇಲೆ ನಂಬಿಗಸ್ತಿಕೆಯಲ್ಲಿ ಕೂತುಕೊಳ್ಳುವನು.