Isaiah 16:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ ಜಂಬದವರೂ ಎಂದು ನಾವು ಕೇಳಿದ್ದೇವೆ. ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.
Kannada BSI Bible 2016
ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ ಅವರ ಅಹಂಕಾರದಂಭ ಗರ್ವೋದ್ರೇಕ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ. ಅವರು ಕೊಚ್ಚಿಕೊಳ್ಳುವದೆಲ್ಲಾ ಬರೀ ಬುರುಡೆಯೇ.
Kannada Bible (KNCL) BSI 2016
ಯೆಹೂದ ಜನತೆ ಪೇಳ್ವರವರಿಗೆ: “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ. ಆಕೆಗೆ ಬಹಳ ಗರ್ವ. ಆಕೆಯ ಅಹಂಕಾರವು, ಆಕೆಯ ಗರ್ವವು ಮತ್ತು ಆಕೆಗೆ ಕೋಪವು ಸಹ ಉಂಟು. ಆದರೆ ಆಕೆಯ ಕೊಚ್ಚಿಕೊಳ್ಳುವಿಕೆ ಬರಿದಾದದ್ದು.