Isaiah 17:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.
Kannada BSI Bible 2016
ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ; ಹೀಗಿರಲು ನೀನು ಇಷ್ಟವಾದ ಗಿಡಗಳನ್ನು ನೆಟ್ಟು ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ಹಾಕಿದ್ದಿ;
Kannada Bible (KNCL) BSI 2016
ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,