Isaiah 17:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ದಿವಸ ಆ ಕೊಂಬೆಗಳನ್ನು ನೆಟ್ಟು ಅದು ಚಿಗುರುವಂತೆ ಮಾಡುವಿರಿ. ಮರುದಿವಸ ಅದು ಚಿಗುರುವದು. ಸುಗ್ಗಿಯ ಕಾಲದಲ್ಲಿ ನೀವು ದ್ರಾಕ್ಷಿತೋಟಕ್ಕೆ ಹೋದಾಗ ದ್ರಾಕ್ಷಿಬಳ್ಳಿಗಳೆಲ್ಲಾ ರೋಗದಿಂದ ಸತ್ತುಹೋಗಿರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ.
Kannada BSI Bible 2016
ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೀಜವನ್ನು ನೆಟ್ಟ ದಿವಸದಲ್ಲಿಯೇ ಬೇಲಿಕಟ್ಟಿ, ಮಾರಣೆಯ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ; ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತವ್ಯಥೆಯ ದಿವಸವೇ.
Kannada Bible (KNCL) BSI 2016
ಬೀಜವನ್ನು ನೆಟ್ಟ ದಿನವೇ ಬೇಲಿಕಟ್ಟಿದೆ. ಮಾರನೆಯ ದಿನವೇ ಅದು ಮೊಳೆಯುವಂತೆ ಮಾಡಿದೆ. ಆದರೂ ನಿನಗೆ ಸಿಗುವ ಸುಗ್ಗಿ, ವ್ಯಾಧಿ ಮತ್ತು ಅತೀವ ವ್ಯಥೆಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳೆಸಲು ಸಸಿಯನ್ನು ಹಾಕಿದ ದಿನದಲ್ಲಿ ಬೇಲಿಹಾಕಿ ಮತ್ತು ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆಯುವಂತೆ ಮಾಡಿದರೂ, ರೋಗದ ಹಾಗೂ ಗುಣಪಡಿಸಲಾರದ ಬೇನೆಯ ದಿನದಲ್ಲಿ ನಿನ್ನ ಸುಗ್ಗಿ ಏನೂ ಇರುವುದಿಲ್ಲ.