Isaiah 17:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.
Kannada BSI Bible 2016
ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ! ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿಯಾಡುವ ದೂಳಿನಂತೆಯೂ ಅಟ್ಟಲ್ಪಡುವರು. ಇಗೋ, ಸಂಜೆಯಲ್ಲಿ ದಿಗಿಲುಬಿದ್ದು ಉದಯದೊಳಗಾಗಿ ಇಲ್ಲವಾಗುವರು!
Kannada Bible (KNCL) BSI 2016
ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.