Isaiah 17:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.
Kannada BSI Bible 2016
ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.
Kannada Bible (KNCL) BSI 2016
ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು!.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾಯಂಕಾಲದಲ್ಲಿ ಭಯಭ್ರಾಂತಿ, ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು. ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.