Isaiah 18:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ, ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.
Kannada BSI Bible 2016
ಸಮುದ್ರ ಮಾರ್ಗದಿಂದಲೂ ಹಾ! ಆಪಿನ ದೋಣಿಗಳಲ್ಲಿ ನೀರಿನ ಮೇಲೆಯೂ ರಾಯಭಾರಿ ಗಳನ್ನು ಕಳುಹಿಸುವಂತಾದ್ದೇ! ಆಶ್ಚರ್ಯ ತೀವ್ರವಾದ ದೂತರೇ, ಚದುರಿಸಲ್ಪಟ್ಟಿರುವ ಮತ್ತು ಸೂರೆಯಾಗಿ ರುವ ಜನಾಂಗದವರ ಬಳಿಗೂ ಹುಟ್ಟಿದಂದಿನಿಂದ ಇಲ್ಲಿನ ವರೆಗೂ ಭಯಂಕರವಾದ ಜನರ ಬಳಿಗೂ ಮಹಾಬಲದಿಂದ ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ಜನಾಂಗದ ಬಳಿಗೂ ಹೋಗಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ವೇಗವುಳ್ಳ ದೂತರೇ, ಉನ್ನತವಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.
Kannada Bible (KNCL) BSI 2016
ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ಆಪಿನ ದೋಣಿಗಳಲ್ಲಿ ಸಮುದ್ರ ಮಾರ್ಗದಿಂದ ರಾಯಭಾರಿಗಳನ್ನು ನೀರಿನ ಮೇಲೆ ಕಳುಹಿಸುತ್ತದೆ. ಶೀಘ್ರವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನುಣುಪಾದ ಚರ್ಮವುಳ್ಳ ಜನರ ಬಳಿಗೂ, ಸರ್ವರಿಗೂ ಭಯಪ್ರಧರಾಗಿರುವ ಜನರ ಬಳಿಗೂ, ವಿಚಿತ್ರ ಭಾಷೆಯಿರುವ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ರಾಷ್ಟ್ರದವರ ಬಳಿಗೂ ಹೋಗಿರಿ.