Isaiah 18:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!
Kannada BSI Bible 2016
ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನೆತ್ತುವಾಗ ನೋಡಿರಿ, ತುತೂರಿಯನ್ನೂದುವಾಗ ಕೇಳಿರಿ!
Kannada Bible (KNCL) BSI 2016
ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ: ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.