Isaiah 18:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.
Kannada BSI Bible 2016
ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ ಹೇಳಿರುವದೇನಂದರೆ, ಬಿಸಿಲಿನಲ್ಲಿ ಜಳಜಳಿಸುವ ದಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂಬದೇ.
Kannada Bible (KNCL) BSI 2016
ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ: “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನಗೆ ಹೀಗೆ ಹೇಳಿದರು, “ನಾನು ನನ್ನ ವಿಶ್ರಾಂತಿಯನ್ನು ತೆಗೆದುಕೊಳ್ಳುವೆನು. ಬಿಸಿಹಗಲಿನ ಸೂರ್ಯನಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದಂತೆಯೂ ನಾನು ನನ್ನ ನಿವಾಸಸ್ಥಾನದಲ್ಲಿ ಸುಮ್ಮನೆ ನೋಡುತ್ತಿರುವೆನು.”