Isaiah 18:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವುಗಳನ್ನು ಅಡವಿಯ ಪ್ರಾಣಿಗಳಿಗೂ ಬೆಟ್ಟದಹಕ್ಕಿಗಳಿಗೂ ತಿನ್ನಲು ಬಿಡುವರು. ಪಕ್ಷಿಗಳು ಬೇಸಿಗೆಕಾಲದಲ್ಲಿ ದ್ರಾಕ್ಷಾಲತೆಗಳ ಮೇಲೆ ವಾಸಿಸುತ್ತವೆ; ಚಳಿಗಾಲದಲ್ಲಿ ಕಾಡುಪ್ರಾಣಿಗಳು ದ್ರಾಕ್ಷಾಲತೆಗಳನ್ನು ತಿನ್ನುತ್ತವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವೆಲ್ಲವು ಬೆಟ್ಟದ ಪಕ್ಷಿಗಳಿಗೂ, ಭೂಮಿಯ ಕಾಡುಮೃಗಗಳಿಗೂ ಆಹಾರವಾಗಿ ಬಿದ್ದಿರುವವು. ಬೇಸಿಗೆಯಲ್ಲಿ ಪಕ್ಷಿಗಳಿಗೂ, ಹಿಮಕಾಲದಲ್ಲಿ ಕಾಡುಮೃಗಗಳಿಗೂ ಆಹಾರವಾಗುವುದು.
Kannada BSI Bible 2016
ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು.ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡಿಯಲ್ಪಟ್ಟವರ ಶವಗಳೆಲ್ಲಾ ಬೆಟ್ಟದ ಹದ್ದುಗಳಿಗೂ ಕಾಡುಮೃಗಗಳಿಗೂ ಪಾಲಾಗಿ ಬಿದ್ದಿರುವವು, ಬೇಸಿಗೆಯಲ್ಲಿ ಹದ್ದುಗಳಿಗೂ ಹಿಮಗಾಲದಲ್ಲಿ ಕಾಡುಮೃಗಗಳಿಗೂ ಜೀವನವಾಗುವವು.
Kannada Bible (KNCL) BSI 2016
ಹೀಗೆ ಕಡಿಯಲ್ಪಟ್ಟವರ ಶವಗಳೆಲ್ಲ ರಣಹದ್ದುಗಳ ಮತ್ತು ಕಾಡುಮೃಗಗಳ ಪಾಲಾಗುವುವು; ಪಕ್ಷಿಗಳಿಗೆ ಬೇಸಿಗೆಯ ಆಹಾರವಾಗುವುವು, ಪ್ರಾಣಿಗಳಿಗೆ ಚಳಿಗಾಲದ ಉಣಿಸಾಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳೆಲ್ಲ ಬೆಟ್ಟದ ಹದ್ದುಗಳಿಗೂ, ಭೂಮಿಯ ಮೃಗಗಳಿಗೂ ಆಹಾರವಾಗುವುವು. ಅದು ಪಕ್ಷಿಗಳಿಗೆ ಬೇಸಿಗೆ ಕಾಲದಲ್ಲಿಯೂ, ಕಾಡುಮೃಗಗಳಿಗೆ ಚಳಿಗಾಲದಲ್ಲಿಯೂ ಆಹಾರವಾಗುವುದು.