Isaiah 18:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.
Kannada BSI Bible 2016
ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್‌ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಉನ್ನತರಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮಮಹತ್ತಿರುವ ಚೀಯೋನ್ ಪರ್ವತಕ್ಕೆ ಆತನಿಗೋಸ್ಕರ ಕಾಣಿಕೆಯನ್ನು ತರುವರು.
Kannada Bible (KNCL) BSI 2016
ಆಗ ಎತ್ತರವಾದ, ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾದ, ಪ್ರಬಲ ಆಕ್ರಮಣಕಾರಿಗಳಾದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರು ಸರ್ವೇಶ್ವರ ಸ್ವಾಮಿಯ ಹೆಸರಾಂತ ಸಿಯೋನ್ ಪರ್ವತಕ್ಕೆ ಬರುವರು. ಸೇನಾಧೀಶ್ವರ ಸರ್ವೇಶ್ವರ ಅವರಿಂದ ಕಾಣಿಕೆಗಳನ್ನು ಸ್ವೀಕರಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎತ್ತರವಾದ ಹಾಗೂ ನುಣುಪು ಚರ್ಮವುಳ್ಳ ಜನರಿಂದಲೂ, ಸರ್ವರಿಗೂ ಭಯಪ್ರಧರಾದ ಜನರಿಂದಲೂ, ವಿಚಿತ್ರ ಭಾಷೆಯಿಂದ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ಜನರಿಂದಲೂ ಸರ್ವಶಕ್ತರಾದ ಯೆಹೋವ ದೇವರಿಗೆ ಕಾಣಿಕೆಗಳು ತರಲಾಗುವುದು. ಹೌದು, ಸೇನಾಧೀಶ್ವರ ಯೆಹೋವ ದೇವರ ಹೆಸರುಳ್ಳ ಚೀಯೋನ್ ಪರ್ವತಕ್ಕೆ ಕಾಣಿಕೆಗಳು ತರಲಾಗುವುದು.