Isaiah 19:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.
Kannada BSI Bible 2016
ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.
Kannada Bible (KNCL) BSI 2016
ಈಜಿಪ್ಟಿನ ವಿಷಯವಾಗಿ ದೈವೋಕ್ತಿ: ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.