Isaiah 19:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚೋಯನಿನ ನಗರದ ಪ್ರಮುಖರು ಮೂರ್ಖರಾಗಿದ್ದಾರೆ. ಫರೋಹನ “ಜ್ಞಾನಿಗಳಾದ ಸಲಹೆಗಾರರು” ತಪ್ಪು ಸಲಹೆ ಕೊಡುತ್ತಾರೆ. ಅವರು ತಾವೇ ಬುದ್ಧಿವಂತರೆಂದೂ ರಾಜವಂಶದವರೆಂದೂ ಹೇಳಿಕೊಳ್ಳುವರು. ಆದರೆ ತಾವು ನೆನಸುವಷ್ಟರ ಮಟ್ಟಿಗೆ ಅವರು ಬುದ್ಧಿವಂತರಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
Kannada BSI Bible 2016
ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವೃದ್ಧರ ಆಲೋಚನೆಯೂ ಹುಚ್ಚಾಟ; ನೀವು ಫರೋಹನಿಗೆ - ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜವಂಶೀಯನು ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ? ನಿನ್ನ ಜ್ಞಾನಿಗಳು ಎಲ್ಲಿ?
Kannada Bible (KNCL) BSI 2016
“ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೋವನ್ ಪಟ್ಟಣದ ಅಧಿಪತಿಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿದೆ. ನೀವು ಫರೋಹನನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ಶಿಷ್ಯನೆಂದು ಹೇಳುವುದು ಹೇಗೆ”?