Isaiah 19:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟೇ, ನಿನ್ನ ಜ್ಞಾನಿಗಳು ಎಲ್ಲಿ? ಸರ್ವಶಕ್ತನಾದ ಯೆಹೋವನು ಈಜಿಪ್ಟ್ ದೇಶಕ್ಕೆ ಮಾಡಿರುವ ಯೋಜನೆಯನ್ನು ನಿನ್ನ ಜ್ಞಾನಿಗಳು ಮೊದಲು ತಿಳಿದುಕೊಳ್ಳಬೇಕು. ನಿಮಗೆ ಸಂಭವಿಸಲಿರುವುದನ್ನು ಅವರು ನಿನಗೆ ತಿಳಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.
Kannada BSI Bible 2016
ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿನಗೆ ತಿಳಿಯ ಹೇಳಲಿ, ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅರಿತುಕೊಳ್ಳಲಿ.
Kannada Bible (KNCL) BSI 2016
ಈಜಿಪ್ಟಿನ ಅರಸನೇ, ನಿನ್ನ ವಿದ್ವಾಂಸರೆಲ್ಲಿ? ಅವರೇ ನಿನಗೆ ತಿಳುವಳಿಕೆ ಕೊಡಲಿ. ಈಜಿಪ್ಟಿನ ವಿರೋಧವಾಗಿ ಸೇನಾಧೀಶ್ವರ ಸರ್ವೇಶ್ವರ ಯೋಚಿಸಿರುವುದನ್ನು ಅವರೇ ನಿನಗೆ ತಿಳಿಯಪಡಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಜ್ಞಾನಿಗಳು ಎಲ್ಲಿ? ನಿನಗೆ ಅವರು ಹೇಳಲಿ. ಸೇನಾಧೀಶ್ವರ ಯೆಹೋವ ದೇವರು ಈಜಿಪ್ಟಿನವರ ವಿರೋಧವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದುಕೊಳ್ಳಲಿ.