Isaiah 19:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚೋಯನಿನ ಅಧಿಪತಿಗಳು ಮೋಸಹೋದರು. ನೋಫಿನ ಪ್ರಮುಖರು ಸುಳ್ಳನ್ನು ನಂಬಿದರು. ಆದ್ದರಿಂದ ನಾಯಕರು ಈಜಿಪ್ಟನ್ನು ತಪ್ಪುದಾರಿಗೆ ನಡೆಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.
Kannada BSI Bible 2016
ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೋಯನಿನ ಪ್ರಭುಗಳು ಬುದ್ಧಿಗೆಟ್ಟಿದ್ದಾರೆ, ನೋಫಿನ ಪ್ರಧಾನರು ಮೋಸಹೋಗಿದ್ದಾರೆ, ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮಗೊಳಿಸಿದ್ದಾರೆ.
Kannada Bible (KNCL) BSI 2016
ಚೋಯನಿನ ಅಧಿಪತಿಗಳು ಮಂದಮತಿಗಳು. ನೋಫಿನ ಮುಖ್ಯಮಂತ್ರಿಗಳು ಮೋಸಗಾರರು. ಈಜಿಪ್ಟ್ ಜನಾಂಗದ ಮೂಲೆಗಲ್ಲಿನಂತಿದ್ದವರೇ ಜನರನ್ನು ತಪ್ಪುದಾರಿಗೆ ಎಳೆದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೋವನಿನ ಶ್ರೇಷ್ಠರು ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಈಜಿಪ್ಟಿನ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ. ಅದನ್ನು ತಪ್ಪು ದಾರಿಗೆಳೆದಿದ್ದಾರೆ.