Isaiah 19:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಈಜಿಪ್ಟಿನವರು ಭಯದಿಂದ ಕಂಗೆಟ್ಟ ಹೆಂಗಸರಂತಿರುವರು. ಅವರು ಸರ್ವಶಕ್ತನಾದವನಿಗೆ ಭಯಪಡುವರು. ಯೆಹೋವನು ಜನರನ್ನು ಶಿಕ್ಷಿಸಲು ತನ್ನ ಕೈಯನ್ನೆತ್ತುವನು. ಆಗ ಅವರೆಲ್ಲರೂ ಹೆದರಿಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.
Kannada BSI Bible 2016
ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಐಗುಪ್ತವು ಹೆಣ್ಣಾಗಿ ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಕೈಬೀಸುವದರಿಂದ ಭಯಪಟ್ಟು ನಡುಗುವದು.
Kannada Bible (KNCL) BSI 2016
ಆ ದಿನದಂದು ಈಜಿಪ್ಟಿನವರು ಹೆಂಗಸರಂತೆ ಅಂಜುಬುರುಕರಾಗುವರು; ಸೇನಾಧೀಶ್ವರ ಸರ್ವೇಶ್ವರ ತಮ್ಮನ್ನು ದಂಡಿಸಲು ಕೈಯೆತ್ತುವಾಗ ಅವರು ಭಯಪಟ್ಟು ನಡುಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಈಜಿಪ್ಟಿನವರು ಹೆಂಗಸರ ಹಾಗೆ ಇರುವರು. ಸೇನಾಧೀಶ್ವರ ಯೆಹೋವ ದೇವರು ಅದರ ಮೇಲೆ ಎತ್ತಿದ ಕೈಯನ್ನು ಬೀಸುತ್ತಿರುವುದರಿಂದ ಅವರು ಹೆದರಿ ಭಯಪಡುವರು.