Isaiah 19:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಈಜಿಪ್ಟಿನಲ್ಲಿ ಕಾನಾನ್ ದೇಶದ (ಯೆಹೂದ್ಯರ) ಭಾಷೆಯನ್ನಾಡುವ ಐದು ಪಟ್ಟಣಗಳಿರುವವು. ಅದರಲ್ಲಿ ಒಂದರ ಹೆಸರು “ನಾಶನದ ನಗರ.” ಆ ಜನರು ಸರ್ವಶಕ್ತನಾದ ಯೆಹೋವನನ್ನು ಹಿಂಬಾಲಿಸಲು ತೀರ್ಮಾನಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”
Kannada BSI Bible 2016
ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತದೇಶದಲ್ಲಿರುವವು; ಇವುಗಳಲ್ಲಿ ಒಂದರ ಹೆಸರು ನಾಶಪುರ.
Kannada Bible (KNCL) BSI 2016
ಆ ದಿನದಂದು ಈಜಿಪ್ಟಿನ ನಾಡಿನಲ್ಲಿ ಐದು ಪಟ್ಟಣಗಳಲ್ಲಿ ಕಾನಾನಿನ (ಹಿಬ್ರು) ಭಾಷೆಯನ್ನಾಡುವ ಜನರು ತುಂಬಿರುವರು. ಅವರು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಶರಣರೆಂದು ಪ್ರಮಾಣ ಮಾಡುವರು. ಆ ಪಟ್ಟಣಗಳಲ್ಲಿ ಒಂದಕ್ಕೆ “ರವಿಪುರ” ಎಂಬ ಹೆಸರಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸದಲ್ಲಿ ಈಜಿಪ್ಟಿನ ಐದು ಪಟ್ಟಣಗಳು ಸೇನಾಧೀಶ್ವರ ಯೆಹೋವ ದೇವರಿಗೆ ಆಣೆಯಿಟ್ಟುಕೊಳ್ಳುವವು. ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಈಜಿಪ್ಟ್ ದೇಶದಲ್ಲಿರುವುವು. ಅವುಗಳಲ್ಲಿ ಒಂದರ ಹೆಸರು “ನಾಶಪುರ.”