Isaiah 19:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಈಜಿಪ್ಟಿನ ಜನರನ್ನು ಶಿಕ್ಷಿಸುವನು. ಆಮೇಲೆ ಆತನು ಅವರನ್ನು ಕ್ಷಮಿಸುವನು. ಆಗ ಅವರು ಆತನ ಬಳಿಗೆ ಹಿಂದಿರುಗಿ ಬರುವರು. ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.
Kannada BSI Bible 2016
ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೋವನು ಐಗುಪ್ತ್ಯರನ್ನು ಹೊಡೆಯುವನು, ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು; ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.
Kannada Bible (KNCL) BSI 2016
ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರನ್ನು ಹೊಡೆಯುವರು; ಗಾಯಮಾಡಿ ಸ್ವಸ್ಥ ಮಾಡುವರು. ಅವರು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು, ದೇವರು ಅವರನ್ನು ಆಲೈಸಿ ಸ್ವಸ್ಥ ಮಾಡುವರು.