Isaiah 19:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಇಸ್ರೇಲ್, ಅಶ್ಶೂರ ಮತ್ತು ಈಜಿಪ್ಟು ಒಟ್ಟಾಗಿ ಸೇರಿ ದೇಶವನ್ನು ನಿಯಂತ್ರಿಸುವರು. ಇದು ದೇಶಕ್ಕೆ ಆಶೀರ್ವಾದದಾಯಕವಾಗಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.
Kannada BSI Bible 2016
ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಇಸ್ರಾಯೇಲು ಐಗುಪ್ತ ಅಶ್ಶೂರಗಳೊಂದಿಗೆ ಕಲೆತು ಈ ಮೂರೂ ಲೋಕದ ಮಧ್ಯದಲ್ಲಿ ಆಶೀರ್ವಾದದ ನಿಧಿಯಾಗುವವು.
Kannada Bible (KNCL) BSI 2016
ಆ ದಿನದಂದು ಇಸ್ರಯೇಲ್ ಈಜಿಪ್ಟಿನೊಂದಿಗೂ ಅಸ್ಸೀರಿಯದೊಂದಿಗೂ ಸೇರುವುದು. ಈ ಮೂರು ರಾಷ್ಟ್ರಗಳು ಇಡೀ ಜಗಕ್ಕೆ ಆಶೀರ್ವಾದದ ಕೇಂದ್ರವಾಗಿ ಪರಿಣಮಿಸುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಇಸ್ರಾಯೇಲು ಈಜಿಪ್ಟಿನವರ ಮತ್ತು ಅಸ್ಸೀರಿಯದವರ ಸಂಗಡ ಮೂರನೆಯದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವುದು.