Isaiah 19:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಈ ದೇಶಗಳನ್ನು ಆಶೀರ್ವದಿಸುವನು. ಆತನು, “ಈಜಿಪ್ಟೇ, ನೀನು ನನ್ನವನು; ಅಶ್ಶೂರವೇ, ನಾನು ನಿನ್ನನ್ನು ನಿರ್ಮಿಸಿದೆನು. ಇಸ್ರೇಲೇ, ನೀನು ನನ್ನ ಸ್ವಾಸ್ತ್ಯ. ನೀವೆಲ್ಲರೂ ಆಶೀರ್ವದಿಸಲ್ಪಟ್ಟವರು” ಎನ್ನುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.
Kannada BSI Bible 2016
ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಸೃಷ್ಟಿಯಾದ ಅಶ್ಶೂರಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇಲಿಗೂ ಶುಭವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸಿದ್ದಾನಷ್ಟೆ.
Kannada Bible (KNCL) BSI 2016
“ನನ್ನ ಪ್ರಜೆಯಾದ ಈಜಿಪ್ಟ್, ನನ್ನ ಕೈಚಳಕದ ಅಸ್ಸೀರಿಯಾ, ನನ್ನ ಸೊತ್ತಾದ ಇಸ್ರಯೇಲ್ ನಿಮಗೆ ಶುಭಮಂಗಳ,” ಎಂದು ಅವುಗಳನ್ನು ಸರ್ವಶಕ್ತ ಸರ್ವೇಶ್ವರ ಸ್ವಾಮಿ ಆಶೀರ್ವದಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಜೆಯಾದ ಈಜಿಪ್ಟಿಗೂ, ನನ್ನ ಕೈಕೆಲಸವಾದ ಅಸ್ಸೀರಿಯಕ್ಕೂ ಮತ್ತು ನನ್ನ ಸೊತ್ತಾದ ಇಸ್ರಾಯೇಲಿಗೂ, “ನಿಮಗೆ ಆಶೀರ್ವಾದ,” ಎಂದು ಸೇನಾಧೀಶ್ವರ ಯೆಹೋವ ದೇವರು ಅವುಗಳನ್ನು ಆಶೀರ್ವಾದ ಮಾಡುವರು.