Isaiah 19:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.
Kannada BSI Bible 2016
ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದ ಅಂತರಾತ್ಮವು ಬರಿದಾಗುವದು; ಅದರ ಆಲೋಚನೆಯನ್ನು ಭಂಗಪಡಿಸುವೆನು; ಅಲ್ಲಿಯವರು ವಿಗ್ರಹಗಳನ್ನೂ ಮಂತ್ರಗಾರರನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸುವರು.
Kannada Bible (KNCL) BSI 2016
ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.