Isaiah 19:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನದಿಯ ದಡದಲ್ಲಿರುವ ಮರಗಳೆಲ್ಲಾ ಒಣಗಿಹೋಗಿ ಗಾಳಿಯಲ್ಲಿ ಹಾರಿಹೋಗುವವು. ನದಿಯ ತೀರದಲ್ಲಿರುವ ಮರಗಳೂ ಒಣಗಿಹೋಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೈಲ್ ನದಿಯ ತೀರ, ನೈಲ್ ನದಿಯ ತೀರದಲ್ಲಿ ಇರುವ ಬಯಲುಗಳು, ನೈಲ್ ನದಿಯ ತೀರದಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ, ಗಾಳಿಗೆ ಸಿಕ್ಕಿ ಮಾಯವಾಗುವವು.
Kannada BSI Bible 2016
ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನದಿಯ ಪಕ್ಕದ ತೀರಭೂವಿುಯು ಬೀಡು ಬೀಳುವದು; ನದಿಯಲ್ಲಿ ಬಿತ್ತಿದ ಎಲ್ಲಾ ಬೀಜವು ಒಣಗಿ ಗಾಳಿಗೆ ಸಿಕ್ಕಿ ಮಾಯವಾಗುವದು.
Kannada Bible (KNCL) BSI 2016
ನದಿಯ ತೀರಗಳು ಬರಡಾಗುವುವು. ನದಿಯಲ್ಲಿ ಬಿದ್ದ ಬೀಜಗಳೆಲ್ಲ ಒಣಗಿ ಗಾಳಿಗೆ ತೂರಿಹೋಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೈಲ್ ನದಿಯ ಹತ್ತಿರದ ತೀರವು ಬರುಡಾಗುವುದು. ನದಿಯ ಬಳಿಯಲ್ಲಿ ಬಿತ್ತಿದ ಬೀಜಗಳೆಲ್ಲವೂ ಒಣಗಿ, ಗಾಳಿಗೆ ತೂರಿಹೋಗುವುವು.