Isaiah 19:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಸ್ತರೂ ಮೀನು ಹಿಡಿಯುವವರೂ ನೈಲ್ ನದಿಯ ನೀರು ಬತ್ತಿಹೋದದ್ದಕ್ಕಾಗಿ ದುಃಖಿಸುತ್ತಾ ಅಳುವರು. ಅವರು ಜೀವನೋಪಾಯಕ್ಕಾಗಿ ನೈಲ್ ನದಿಯನ್ನು ಆಧಾರ ಮಾಡಿಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಸ್ತರು ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.
Kannada BSI Bible 2016
ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಸ್ತರು ಪ್ರಲಾಪಿಸುವರು, ನದಿಯಲ್ಲಿ ಗಾಳಹಾಕುವವರು ಶೋಕಪಡುವರು, ನೀರಿನ ಮೇಲೆ ಬಲೆಬೀಸುವವರು ಕುಗ್ಗುವರು, ನಯವಾದ ನಾರಿನ ಕೆಲಸದವರೂ
Kannada Bible (KNCL) BSI 2016
ಬೆಸ್ತರು ಕಣ್ಣೀರಿಡುವರು; ಗಾಳ ಹಾಕುವವರು ಗೋಳಿಡುವರು; ಬಲೆ ಬೀಸುವವರು ಸೊರಗಿಹೋಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೀನುಗಾರರು ಕೂಡ ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.