Isaiah 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಂಡೆಗಳ ಹಿಂಬದಿಯಲ್ಲಿಯೂ ಹೊಲಸಿನಲ್ಲಿಯೂ ಅವಿತುಕೊಳ್ಳಿರಿ. ನೀವು ಯೆಹೋವನಿಗೆ ಭಯಪಟ್ಟು ಆತನ ಮಹಾಶಕ್ತಿಗೆ ಮರೆಯಾಗಿ ಅವಿತುಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.
Kannada BSI Bible 2016
ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ದೂಳಿನಲ್ಲಿ ಅವುತುಕೋ!
Kannada Bible (KNCL) BSI 2016
ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ. ಧೂಳಿನಲ್ಲಿ ನೀನು ಅಡಗಿಕೋ.