Isaiah 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
Kannada BSI Bible 2016
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
Kannada Bible (KNCL) BSI 2016
ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.