Isaiah 2:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನಾದ ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ಆ ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಆ ಅಹಂಕಾರಿಗಳನ್ನು ಜನರು ದೊಡ್ಡಜನರೆಂದು ಪರಿಗಣಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.
Kannada BSI Bible 2016
ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನ [ನ್ಯಾಯನಿರ್ಣಯ] ದಿವಸವು ಗರ್ವದಿಂದ ಹೆಚ್ಚಿಕೊಂಡಿರುವ ಸಮಸ್ತಕ್ಕೂ ಸಂಭವಿಸುವದು; ಆಗ ಅದೆಲ್ಲಾ ತಗ್ಗುವದು.
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.