Isaiah 2:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.
Kannada BSI Bible 2016
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಮನುಷ್ಯರು ಆತನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ ನೆಲದ ಹಳ್ಳಕೊಳ್ಳಗಳಲ್ಲಿಯೂ ಸೇರಿಕೊಳ್ಳುವರು.
Kannada Bible (KNCL) BSI 2016
ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರಿಗೂ ಅವರ ಮಹಿಮೆಗೂ, ಅವರ ಘನಕ್ಕೂ ಹೆದರಿ, ಬಂಡೆಗಳ ಸಂದುಗಳಿಗೂ, ಭೂಮಿಯ ಗವಿಗಳಿಗೂ ಜನರು ಸೇರಿಕೊಳ್ಳುವರು.